Pages(key to [[Help:Page Status{{!}}Page Status]])
ಅಂಗಕ್ಕೆಂದಡೆ ಹಿರಿಯ ಹರಿವಾಣವ ತುಂಬಿ ಬೋನವ ತಾ ಎಂಬರು. ಲಿಂಗಕ್ಕೆಂದಡೆ ಚಿಕ್ಕ ಗಿಣ್ಣಿಲು ತುಂಬಿ ಬೋನವ ತಾ ಎಂಬರು. ಅಂಗವ ಹಿರಿದು ಮಾಡಿ ಲಿಂಗವ ಕಿರಿದು ಮಾಡಿ ಮನೆಯಲ್ಲಿ ಮಡಕೆ ತುಂಬಿ ಬೋನವ ಮಾಡಿ ಚಿಕ್ಕ ಕುಡಿಕೆ ಗಿಣ್ಣಿಲು ಲಿಂಗಕ್ಕೆ ಬೋನವ ಹಿಡಿವ ಈ ಮಡಕೆಮಾರಿಗಳನೇನೆಂಬೆ ಗುಹೇಶ್ವರಾ.