ಅಂಗಜಂಗುಳಿಗಳೆಲ್ಲಾ ಅಶನಕ್ಕೆ ನೆರೆದರು. ಲಿಂಗದ ಹವಣನಿವರೆತ್ತ ಬಲ್ಲರು ? ಕಾಯಜೀವಿಗಳು ಕಳವಳಧಾರಿಗಳು ದೇವರ ಸುದ್ದಿಯನಿವರೆತ್ತ ಬಲ್ಲರು ? ಮದ್ಯಪಾನವನುಂಡು ಮದವೆದ್ದ ಜೋಗಿಯಂತೆ ನುಡಿವರು. ಗುಹೇಶ್ವರನ ನಿಲವನಿವರೆತ್ತ ಬಲ್ಲರು.