ಅಂಗಜೀವಿಗಳೆಲ್ಲಾ ಅಶನಕ್ಕೆ ನೆರೆದು ಲಿಂಗವಾರ್ತೆಯ ನುಡಿವರಯ್ಯಾ. ಕಾಯಜೀವಿಗಳೆಲ್ಲಾ ಕಳವಳಿಸಿ ನುಡಿವರಯ್ಯಾ. ಮನಬಂದ ಪರಿಯಲ್ಲಿ ನುಡಿವಿರಿ ಗುಹೇಶ್ವರಲಿಂಗ ನಿಮಗೆಲ್ಲಿಯದೊ ?