ಅಂಗದಲ್ಲಿ ಅಳವಟ್ಟಿಪ್ಪ ಆಚಾರವೆ ಲಿಂಗವೆಂದರಿದನು ಮನದಲ್ಲಿ ಬೆಳಗುತ್ತಿಪ್ಪ ಅರಿವೆ ಜಂಗಮವೆಂದರಿದನು ಈ ಎರಡರ ಸಂಗವೆ ತಾನೆಂದರಿದನು ಮಾಡುವ ದಾಸೋಹವೆ ಲಿಂಗಜಂಗಮವೆಂದರಿದನು ನಮ್ಮ ಗುಹೇಶ್ವರಲಿಂಗದಲ್ಲಿ ಸಂಗನಬಸವಣ್ಣನ ನಿಲವನರಿಯಬೇಕು ಕೇಳಾ ಚಂದಯ್ಯಾ.