ಅಂಗದಲ್ಲಿ ಆಚಾರವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ಆಚಾರದಲ್ಲಿ ಪ್ರಾಣವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ಪ್ರಾಣದಲ್ಲಿ ಲಿಂಗವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ಲಿಂಗದಲ್ಲಿ ಜಂಗಮವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ಜಂಗಮದಲ್ಲಿ ಪ್ರಸಾದವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ಪ್ರಸಾದದಲ್ಲಿ ನಿತ್ಯವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ನಿತ್ಯದಲ್ಲಿ ದಾಸೋಹವ ಸ್ವಾಯತವ ಮಾಡಿಕೊಂಡನಯ್ಯಾ ಬಸವಣ್ಣನು. ದಾಸೋಹದಲ್ಲಿ ತನ್ನ ಮರೆದು
ನಿಶ್ಚಿಂತನಿವಾಸಿಯಾಗಿ ಐದಾನೆ ಗುಹೇಶ್ವರಲಿಂಗದಲ್ಲಿ. ಸಂಗನಬಸವಣ್ಣನ ಶ್ರೀಪಾದಕ್ಕೆ ಶರಣೆಂದು ಧನ್ಯರಾಗಬೇಕು ನಡೆಯಾ_ ಸಿದ್ಧರಾಮಯ್ಯಾ