ಅಂಗದ ಕಳೆಯಲೊಂದು ಲಿಂಗವ ಕಂಡೆ. ಲಿಂಗದ ಕಳೆಯಲೊಂದು ಅಂಗವ ಕಂಡೆ. ಅಂಗ ಲಿಂಗ[ದ]ಸಂದಣಿಯನರಸಿ ಕಂಡೆ ನೋಡಿರೆ. ಇಲ್ಲಿಯೆ ಇದಾನೆ ಶಿವನು ! ಬಲ್ಲಡೆ ಇರಿಸಿಕೊಳ್ಳಿರೆ; ಕಾಯವಳಿಯದ ಮುನ್ನ ನೋಡಬಲ್ಲಡೆ. ಗುಹೇಶ್ವರಲಿಂಗಕ್ಕೆ ಬೇರೆಠಾವುಂಟೆ ಹೇಳಿರೆ ?