Pages   (key to Page Status)   


ಅಂಗದ ಕಳೆ ಲಿಂಗದಲ್ಲಿ ಅರತ ಬಳಿಕ
ಅಂಗವೆಂಬ ಶಂಕೆಯಿಲ್ಲ ನೋಡಾ ಶರಣಂಗೆ. ಪ್ರಾಣದ ಕಳೆ ಅರಿವಿನಲ್ಲಿ ಅರತ ಬಳಿಕ
ಶಬ್ದಸಂದಣಿಗೆ ಹಂಗಿಲ್ಲ ನೋಡಾ. ಶರಣ ನಡೆದಡೆ ನಿರ್ಗಮನಿ ನುಡಿದಡೆ ನಿಶ್ಶಬ್ದಿ ! ಗುಹೇಶ್ವರನ ಶರಣಂಗೆ ಕುರುಹಿಲ್ಲ ಕೇಳಾ ಎಲೆ ಅವ್ವಾ.