ಅಂಗದ ಧರೆಯ ಮೇಲೆ ಮೂರು ಬಾವಿಯುಂಟು: ಮೊದಲ ಬಾವಿಯ ಮುಟ್ಟಿದಾತ ಅಂಗಸಂಗಿಯಾದನು. ನಡುವಡ ಬಾವಿಯ ಮುಟ್ಟಿದಾತ ಉತ್ಪತ್ಯ_ಸ್ಥಿತಿ_ಲಯಕ್ಕೊಳಗಾದನು. ಮೇಲಣ ಬಾವಿಯ ಮುಟ್ಟಿದಾತ ಜೀವನ್ಮುಕ್ತನಾದನು._ ಇವ ತಟ್ಟದೆ ಮುಟ್ಟದೆ ಹೋದರು ನೋಡಾ ಪರಬ್ರಹ್ಮವ ದಾಂಟಿ ಗುಹೇಶ್ವರಲಿಂಗದಲ್ಲಿ ಹಂಗು ಹರಿದ ಶರಣರು