ಅಂಗದ ಮೇಲೆ ಲಿಂಗಯುಕ್ತವಾದ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಂಗದ ಮೇಲೆ ಲಿಂಗಯುಕ್ತವಾದ ಭಕ್ತನು ಆ ಭಕ್ತಿಯಾಚಾರದ ನೆಲೆಯನರಿಯದೆ ಸಂಬಂಧಕ್ಕನ್ಯವಾದ ನಂದಿ ವೀರಭದ್ರ ಮತ್ತೆ ಲಿಂಗಂಗಳೆಂಬಿವಾದಿಯಾದ ಭವಿಶೈವದೈವಂಗಳ ಹೆಸರಿನಲ್ಲಿ ಮೀಸಲುವಿಡಿದು ಬಾಸಣಿಸಿ ಮನೆದೈವಕ್ಕೆಂದು ನೇಮಿಸಿ ಮಾಡಿದ ಪಾಕವ ತನ್ನ ಕರಸ್ಥಲದ ನಿಜ ವೀರಶೈವಲಿಂಗಕ್ಕೆ ಓಗರವೆಂದರ್ಪಿಸುವದು ಅನಾಚಾರ
ಪಂಚಮಹಾಪಾತಕ. ಅವನು ಸದಾಚಾರಕ್ಕೆ ಹೊರಗು
ಅದೇನು ಕಾರಣವೆಂದೊಡೆ: ಅದು ಶೈವದೈವೋಚ್ಛಿಷ್ಟವಾದ ಕಾರಣ. ಅದರಿಂಲೂ ಭವಿಯ ಮನೆಯ ಅಶನ ಉತ್ತಮ. ಅದೆಂತೆಂದೊಡೆ:ಅದು ಅನ್ನವಾದ ಕಾರಣ. ಆ ಅನ್ನದ ಪೂರ್ವಾಶ್ರಯ ಕಳೆಯಬಹುದಾಗಿ ಆ ಉಚ್ಛಿಷ್ಟದ ಪೂರ್ವಾಶ್ರಯ ಹೋಗದಾಗಿ. ಅದೆಂತೆಂದೊಡೆ: ಭವಿಹಸ್ತಕೃತಂ ಪಾಕಂ ಲಿಂಗನೈವೇದ್ಯ ಕಿಲ್ಬಿಷಂ ಶಿವಭಕ್ತ ಕೃತಂ ಪಾಕಂ ಲಿಂಗನೈವೇದ್ಯಮುತ್ತಮಂ_ ಎಂದುದಾಗಿ ಭಕ್ತಂಗೆ ಭವಿಯ ಮನೆಯ ಅಶನ ನಾಯಡಗು ನರಮಾಂಸ ಕ್ರಿಮಿ ಮಲಕ್ಕೆ ಸಮವೆಂದರಿದು ಶಿವಭಕ್ತರಾದವರು ಮುಟ್ಟರು; ಅದಕಿಂದಲೂ ಕರಕಷ್ಟ ಕರಕಷ್ಟ ನೋಡಾ. ಅರೆಭಕ್ತರು ತಮ್ಮ ಕುಲದೈವವ ಕೂರ್ತು ಮಾಡಿದ ಆ ಭವಿ ಶೈವದೈವೋಚ್ಛಿಷ್ಟವ ತಾ ನೆರೆಭಕ್ತನಾಗಿ ಆಚಾರವನನುಸರಣೆಯ ಮಾಡಿಕೊಂಡು ಆ ಅರೆಭಕ್ತರ ಮನೆಯಲ್ಲಿ ಹೊಕ್ಕು ಲಿಂಗಾರ್ಚನೆಯ ಮಾಡುವದಕ್ಕಿಂತಲೂ ಹೊರಗಣ ಹೊಲೆಯರ ಮನೆಯ ಅನ್ನವೇ ಮಿಗೆ ಮಿಗೆ ಉತ್ತಮ ಕಾಣಾ ಕೂಡಲಚೆನ್ನಸಂಗಯ್ಯಾ.