ಅಂಗದ ಮೇಲೆ ಲಿಂಗವಿಲ್ಲದನ್ನಕ್ಕರ
ಪ್ರಾಣದಲ್ಲಿ ಲಿಂಗಪರಿಣಾಮವನೆಯ್ದುವ ಪರಿಯೆಂತಯ್ಯಾ ? ಅಂಗತ್ರಯವುಳ್ಳವರು ಲಿಂಗತ್ರಯಸಂಪನ್ನರಾಗಬೇಕು
ಒಂದಂಗ ವಿರಹಿತರಾಗಿಪ್ಪವರುಂಟೆ ? ಕಂಗಳ ನೋಟಕ್ಕೆ ಇಂಬಾವುದು ಹೇಳಾ ಒಂದಂಗ ಬಿಟ್ಟು ಒಂದಂಗ ತೋರದಾಗಿ. ಸಂದುಭೇದವಿಲ್ಲದಿಪ್ಪ ಮಡಿವಾಳನ ನಿಲವು ಕೂಡಲಚೆನ್ನಸಂಗಯ್ಯನಲ್ಲಿ ನಿನಗೆಂತು ಸಾಧ್ಯವಾಯಿತ್ತು ಹೇಳಾ ಸಿದ್ಧರಾಮಯ್ಯ ?