ಅಂಗನೆಯ ಮೊಲೆ ಲಿಂಗವೆ ? ಬಳ್ಳ ಲಿಂಗವೆ ? ಕಿತ್ತು ಬಹ ಸಾಣೆ ಲಿಂಗವೆ ? ಆಡಿನ ಹಿಕ್ಕಿ ಲಿಂಗವೆ ? ಮೆಚ್ಚುವರೆ ಪ್ರಮಥರು ? ಮೆಚ್ಚುವರೆ ಪುರಾತನರು ನಿಮ್ಮ ಭಕ್ತರು ? ಭಾವಭ್ರಮೆಯಳಿದು ಗುಹೇಶ್ವರಾ ನಿಮ್ಮಲ್ಲಿ ಅನಾದಿಸಂಸಿದ್ಧವಾದ ಜಂಗಮವನರಿದಾತ ಬಸವಣ್ಣನೊಬ್ಬನೆ.