ಅಂಗವಿಕಾರವಳಿದು ಸತಿಯ ಸಂಗವರಿಯ


Pages   (key to Page Status)   

ಅಂಗವಿಕಾರವಳಿದು ಸತಿಯ ಸಂಗವರಿಯ ನೋಡಾ
ದೇಹಗುಣಂಗಳಿಲ್ಲಾಗಿ ನಿರ್ದೇಹಪ್ರಸಾದಿ ನೋಡಯ್ಯಾ
ಅಶನವ್ಯಸನಾದಿಗಳೆಲ್ಲವು ಬೆಂದವು ನೋಡಯ್ಯಾ. ಈ ಎಲ್ಲ ಗುಣಂಗಳಳಿದು ಕೂಡಲಸಂಗಮದೇವರಲ್ಲಿ ಸಾವಧಾನಿ ಪ್ರಸಾದಿ ಚೆನ್ನಬಸವಣ್ಣನು.