ಅಂಗವಿಕಾರವಳಿದು ಸತಿಯ ಸಂಗವರಿಯ ನೋಡಾ
ದೇಹಗುಣಂಗಳಿಲ್ಲಾಗಿ ನಿರ್ದೇಹಪ್ರಸಾದಿ ನೋಡಯ್ಯಾ ಅಶನವ್ಯಸನಾದಿಗಳೆಲ್ಲವು ಬೆಂದವು ನೋಡಯ್ಯಾ. ಈ ಎಲ್ಲ ಗುಣಂಗಳಳಿದು ಕೂಡಲಸಂಗಮದೇವರಲ್ಲಿ ಸಾವಧಾನಿ ಪ್ರಸಾದಿ ಚೆನ್ನಬಸವಣ್ಣನು.