ಅಂಗವಿಲ್ಲದ ನಿರಂಗಿಗೆ ಅಗ್ನಿಯ ಬಳಗದ ಅವಯವಂಗಳು
ಬ್ರಹ್ಮಕಪಾಲವೇ ಶಿರಸ್ಸಾಗಿಪ್ಪುದು ನೋಡಾ. ಅಗ್ನಿಯಂಗದ ಉದರದೊಳಗೆ ಪರಿಪರಿಯ ರಸದ ಭಾವಿ. ಆ ರಸದ ಭಾವಿಯ ತುಳಕ ಹೋದವರೆಲ್ಲ ಅಗ್ನಿಯನುಣ್ಣದೆ
ಆ ರಸವನೆ ಉಂಡು
ಅಗ್ನಿಯ ಸ್ವರೂಪವಾದರು ನೋಡ. ಅಗ್ನಿಯ ಸ್ವರೂಪವಾದುದ ಕಂಡು ಕುರುಹಳಿದು ಅರುಹಡಗಿ ನಿರವಯಲಸಮಾದ್ಥಿಯಲ್ಲಿ ನಿಂದ ನಿಬ್ಬೆರಗು ಮೃತ ಗಮನ ರಹಿತನು ನೋಡಾ ಲಿಂಗೈಕ್ಯನು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.