ಅಂಗವಿಲ್ಲದ ಮಂಗಳಾಂಗಿಯ ಮನದಲ್ಲಿ ಶಿವಲಿಂಗದುದಯವ ಕಂಗಳಿಲ್ಲದೆ ಕಂಡು ಅಂಗವಿಲ್ಲದೆ ಸಂಗವ ಮಾಡಿ ನಿಸ್ಸಂಗಿಯಾಗಿ ಸರ್ವಸಂಗಕ್ಕೆ ಹೊರಗಾಗಿ ನಿರ್ವಯಲ ಬೆರಸಲು `ಮಂಗಳ ಮಂಗಳ'ವೆನುತ್ತಿಪ್ಪ ಮಹಾಗಣಂಗಳ ಸಂಗದಲ್ಲಿ ಮೈಮರೆದನು ಕಾಣಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.