ಅಂಡವ ಮೇಲು ಮಾಡಿ ಪಿಂಡಿಯಾಗಿ ಆ ಅಂಡದೊಳಗೆ ನಾಲ್ಕು ಕೈಕರಣ ಅನೇಕ ಉದ್ದವಾದವು ! ಆ ಕೈಕರಣದೊಳಗೊಬ್ಬ ಶರಣ ದಾಸೋಹಮೆನಲು ಆ ಕ್ಷಣ ಒಂದು ಸೋಜಿಗ ಮೂಡಿತ್ತ ಕಂಡೆ ಗುಹೇಶ್ವರಾ