ಅಕಾರದಾದಿಯನರಿ, ಕ್ಷಕಾರದಂತ್ಯವ ತಿಳಿ.



Pages   (key to Page Status)   


ಅಕಾರದಾದಿಯನರಿ
ಕ್ಷಕಾರದಂತ್ಯವ ತಿಳಿ. ಅಕಾರ ಉಕಾರ ಮಕಾರದೊಳಗಣ ಓಂಕಾಪ್ರಭೆಯ ತಿಳಿ. ವೇದಾದಿ ಪಂಚಕದಾದಿಯನರಿ. ಐಶ್ವರ್ಯ ಮೊದಲಾದೈದು ನಾಮವನುಳ್ಳ ವಿಭೂತಿ ಭಸಿತ ಭಸ್ಮ ಕ್ಷಾರ ರಕ್ಷೆ ಎಂಬೈದು ನಿನ್ನಭಿಮುಖದಿಂದ ಜನನವೆ ಹೇಳು ಗುಹೇಶ್ವರಾ ?