ಅಗ್ನಿಯ ಸಂಗದಿಂದೆ ಕಾನನ ಕೆಟ್ಟಂತೆ ಜ್ಯೋತಿಯ ಸಂಗದಿಂದ ಕತ್ತಲೆ ಕೆಟ್ಟಂತೆ ಪರುಷದ ಸಂಗದಿಂದ ಕಬ್ಬಿಣ ಕೆಟ್ಟಂತೆ ಲಿಂಗಾನುಭಾವಿಗಳ ಸಂಗದಿಂದೆ ಎನ್ನ ಹುಟ್ಟು ಹೊಂದುಗಳು ನಷ್ಟವಾಗಿ ಕೆಟ್ಟುಹೋದುವು ನೋಡಾ ಅಖಂಡೇಶ್ವರಾ.