ಅಗ್ನಿಯ ಸುಡುವಲ್ಲಿ ಉದಕವ ತೊಳೆವಲ್ಲಿ ವಾಯುವ ಮೆಟ್ಟಿ ಆಕಾಶವ ಹಿಡಿವಲ್ಲಿ ಯೋಗದ ಹೊಲಬ ನೀನೆತ್ತ ಬಲ್ಲೆ? ಕದಳಿಯ ಬನವ ನಿನ್ನಲ್ಲಿ ನೀನು ತಿಳಿದು ನೋಡು ಮದ ಮತ್ಸರ ಬೇಡ. ಹೊದಕುಳಿಗೊಳಬೇಡ. ಗುಹೇಶ್ವರನೆಂಬ ಲಿಂಗವು ಕಲ್ಪಿತವಲ್ಲ ನಿಲ್ಲೊ.