ಅಘಟಿತ ಘಟಿತನೆ ವಿಪರೀತ ಚರಿತ್ರನೆ ಸಾವರ ಕೈಯಲ್ಲಿ ಪೂಜೆಗೊಂಬರೆ ಲಿಂಗಯ್ಯಾ ? ಸಾವರ ನೋವರ ಕೈಯಲ್ಲಿ ಪೂಜೆಗೊಂಬುದು ಲಜ್ಜೆ ಕಾಣಾ _ ಗುಹೇಶ್ವರಾ.