ಅಚ್ಚಪ್ರಸಾದಿ ಅಚ್ಚಪ್ರಸಾದಿ ಎಂಬಿರಿ ಕೇಳಿರಯ್ಯಾ; ನಿಚ್ಚಕ್ಕೆ ನಿಚ್ಚ ಹುಸಿವ ಹುಸಿಗಳ ಕಂಡೆವಯ್ಯಾ [ನಿಮ್ಮಲ್ಲಿ]. ವಾಯು ಬೀಸದ ಮುನ್ನ ಆಕಾಶ ಬಲಿಯದ ಮುನ್ನ ಲಿಂಗಕ್ಕೆ ಅರ್ಪಿತಮುಖವ ಮರೆದಿರಯ್ಯಾ. ಭೋಜನವ ಮಾಡಿ ಭಾಜನವನಿಕ್ಕಿಟ್ಟು ಹೋಹ ಹಿರಿಯರಿಗೆ ಭಂಗ ನೋಡಾ ಗುಹೇಶ್ವರಾ.