ಅಡಿಗಡಿಗೆ ಲಿಂಗವನಡಿಯಡರಿ ನೋಡಿ ನೋಡಿ
ಕಂಗಳು ಕಡೆಗೋಡಿವರಿದವೆನಗಯ್ಯಾ ಎನ್ನ ಅಶ್ರುಜಲಂಗಳು ! ಆಲಿಕಲ್ಲ ರೂಹಿನಂತೆ ಅರಗಿನ ಪುತ್ಥಳಿಯಂತೆ ತನು ಪುಳಕಿತವಾದ ಬೆಮರ ಬಿಂದುಗಳೆಲ್ಲಾ ! ಕೂಡಲಸಂಗನ ದರ್ಶನಸ್ಪರ್ಶದಿಂದ ಮನವೊಲಿದು ನೆರೆವ ಭರವನೇನ ಹೇಳುವೆನಯ್ಯಾ. 493