ಅಡಿಗೆಯನು ಮಾಡಬೇಕಣ್ಣ - ನಾನೀಗ ಜ್ಞಾ ನದಡಿಗೆಯನು ಮಾಡಬೇಕಣ್ಣ ||

ಅಡಿಗೆಯನ್ನು ಮಾಡಬೇಕುಮಡಿಸಬೇಕು ಮದಗಳನ್ನುಒಡೆಯನಾಜ್ಞೆಯಿಂದ ಒಳ್ಳೆಸಡಗರದಲಿ ಮನೆಯ ಸಾರಿಸಿ ಅ

ತನ್ನ ಗುರುವ ನೆನೆಯ ಬೇಕಣ್ಣತನುಭಾವವೆಂಬ ಭಿನ್ನ ಕಲ್ಮಶವಳಿಯ ಬೇಕಣ್ಣಒನಕೆಯಿಂದ ಕುಟ್ಟಿಕೇರಿ ತನಗೆ ತಾನೆ ಆದ ಕೆಚ್ಚನನುವರಿತು ಇಕ್ಕಬೇಕು ಅರಿವರ್ಗವೆಂಬ ತುಂಟರಳಿಸಿ |

ತತ್ವಭಾಂಡವ ತೊಳೆಯ ಬೇಕಣ್ಣ - ಸತ್ಯಾತ್ಮನಾಗಿಅರ್ತಿ ಅಕ್ಕಿಯ ಮಥಿಸಬೇಕಣ್ಣಕತ್ತರಿ ಮನವೆಂಬ ಹೊಟ್ಟನು ಎತ್ತಿ ಒಲೆಗೆ ಹಾಕಿ ಇನ್ನುಮುತ್ತಿಕೊಂಡಿಹ ಮಮತೆಯನ್ನು ಎತ್ತಿ ಎಸರ ಹಿಂಗಿಸುತಲಿ |

ಜನನ ಸೊಂಡಿಗೆ ಹುರಿಯಬೇಕಣ್ಣ - ನಿಜವಾಗಿ ನಿಂತುತನುವು ತುಪ್ಪವ ಕಾಸಬೇಕಣ್ಣಕನಕಗಿರಿ ಕಾಗಿನೆಲೆಯಾದಿಕೇಶವನ ದಾಸಕನಕನ ಕಟ್ಟಳೆಯೊಳು ನಿಂತು ಸುಖದ ಪಾಕವ ಚಂದದಿ ಸವಿದುಣ್ಣಲಿಕ್ಕೆ |

____