ಅತ್ತಲಿತ್ತಲು ಕಾಣಲಿಲ್ಲ ಬಯಲ ಧಾಳಿ ಮುಟ್ಟಿತ್ತಲ್ಲಾ ! ಸರಳಮಂಡಲ ಮಂಜಿನ ಕಾಳಗತ್ತಲೆ ಕವಿಯಿತ್ತು. ರವಿಯ ರಥದಚ್ಚು ಮುರಿಯಿತ್ತು ! ಶಶಿ ಅಂಶದ ನಿಲವನು ರಾಯ (ರಾಹು ?) ಗೆದ್ದುದ ಕಂಡು ಹಿರಿಯರು ಹೊಲಬುಗೆಟ್ಟರು ಗುಹೇಶ್ವರಾ.