Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅನಂತಸಾಧಕಂಗಳ ಕಲಿತ ಆಯಗಾರನು
ಅಭ್ಯಾಸಿಗಳಿಗೆ ಸಾಧಕವ ಕಲಿಸುವನಲ್ಲದೆ ತಾ ಮರಳಿ ಅಭ್ಯಾಸವ ಮಾಡುವನೆ ಅಯ್ಯಾ ? ಅಖಂಡಪರಿಪೂರ್ಣಬ್ರಹ್ಮವನೊಡಗೂಡಿದ ಮಹಾಘನ ಪರಮ ಶಿವಶರಣನು
ಸತ್‍ಕ್ರಿಯವನಾಚರಿಸಿದಡೂ ಲೋಕೋಪಕಾರವಾಗಿ ಆಚರಿಸುವನಲ್ಲದೆ ಮರಳಿ ತಾನು ಫಲಪದದ ಮುಕ್ತಿಯ ಪಡೆವೆನೆಂದು ಆಚರಿಸುವನೆ ಅಯ್ಯಾ ? ಇದು ಕಾರಣ
ನಿಮ್ಮ ಶರಣನು ಎಷ್ಟು ಸತ್ಕ್ರಿಯವನಾಚರಿಸಿದಡು ಘೃತಸೋಂಕಿದ ರಸನೆಯಂತೆ
ಕಾಡಿಗೆ ಹತ್ತಿದ ಆಲಿಯಂತೆ
ಹುಡಿ ಹತ್ತದ ಗಾಳಿಯಂತೆ ನಿರ್ಲೆಪನಾಗಿರ್ಪನಯ್ಯಾ ಅಖಂಡೇಶ್ವರಾ.