Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅನುಪಮ ಶರಣನ ನೆನಹಿನ ಕೊನೆಯಲ್ಲಿ ಘನಲಿಂಗವು. ಆ ಘನಲಿಂಗದ ನೆನಹಿನ ಕೊನೆಯಲ್ಲಿ ನಿರವಯವು. ಆ ನಿರವಯದ ನೆನಹಿನ ಕೊನೆಯಲ್ಲಿ ನಿರಾಲಂಬವು. ಆ ನಿರಾಲಂಬದ ನೆನಹಿನ ಕೊನೆಯಲ್ಲಿ ನಿರಾಳವು. ಆ ನಿರಾಳದ ನೆನಹಿನ ಕೊನೆಯಲ್ಲಿ ಆದಿಮಹಾಲಿಂಗವು. ಆ ಆದಿ ಮಹಾಲಿಂಗದ ನೆನಹಿನ ಕೊನೆಯಲ್ಲಿ ಚಿತ್‍ಶಕ್ತಿ. ಆ ಚಿತ್‍ಶಕ್ತಿಯ ನೆನಹಿನ ಕೊನೆಯಲ್ಲಿ ಪರಮೇಶ್ವರನು. ಆ ಪರಮೇಶ್ವರನ ನೆನಹಿನ ಕೊನೆಯಲ್ಲಿ ಪರಾಶಕ್ತಿ. ಆ ಪರಾಶಕ್ತಿಯ ನೆನಹಿನ ಕೊನೆಯಲ್ಲಿ ಸದಾಶಿವನು. ಆ ಸದಾಶಿವನ ನೆನಹಿನ ಕೊನೆಯಲ್ಲಿ ಆದಿಶಕ್ತಿ. ಆ ಆದಿಶಕ್ತಿಯ ನೆನಹಿನ ಕೊನೆಯಲ್ಲಿ ಈಶ್ವರನು. ಆ ಈಶ್ವರನ ನೆನಹಿನ ಕೊನೆಯಲ್ಲಿ ಇಚ್ಛಾಶಕ್ತಿ. ಆ ಇಚ್ಛಾಶಕ್ತಿಯ ನೆನಹಿನ ಕೊನೆಯಲ್ಲಿ ಮಹೇಶ್ವರನು. ಆ ಮಹೇಶ್ವರನ ನೆನಹಿನ ಕೊನೆಯಲ್ಲಿ ಜ್ಞಾನಶಕ್ತಿ. ಆ ಜ್ಞಾನಶಕ್ತಿಯ ನೆನಹಿನ ಕೊನೆಯಲ್ಲಿ ಶ್ರೀರುದ್ರಮೂರ್ತಿ. ಆ ಶ್ರೀರುದ್ರಮೂರ್ತಿಯ ನೆನಹಿನ ಕೊನೆಯಲ್ಲಿ ವಿಷ್ಣುವು. ಆ ವಿಷ್ಣುವಿನ ನೆನಹಿನ ಕೊನೆಯಲ್ಲಿ ಮಹಾಲಕ್ಷ್ಮಿ. ಆ ಮಹಾಲಕ್ಷ್ಮಿಯ ನೆನಹಿನ ಕೊನೆಯಲ್ಲಿ ಬ್ರಹ್ಮನು. ಆ ಬ್ರಹ್ಮನ ನೆನಹಿನ ಕೊನೆಯಲ್ಲಿ ಸರಸ್ವತಿ. ಆ ಸರಸ್ವತಿಯ ನೆನಹಿನ ಕೊನೆಯಲ್ಲಿ ಸಕಲ ಚರಾಚರಂಗಳು. ಇಂತಿವೆಲ್ಲವು ಶರಣನ ನೆನಹುದೋರಿದಲ್ಲಿಯೇ ತೋರುತಿರ್ಪವು
ಆ ಶರಣನ ನೆನಹು ನಿಂದಲ್ಲಿಯೇ ಅಡುಗುತಿರ್ಪುವಾಗಿ
ಅಖಂಡೇಶ್ವರಾ
ನಿಮ್ಮ ಶರಣನು ಘನಕ್ಕೆ ಘನಮಹಿಮ
ವಾಙ್ಮನಕ್ಕಗೋಚರನು
ಉಪಮೆಗೆ ಉಪಮಾತೀತನು ನೋಡಾ.