ಅನ್ನದಾನಿ ವಸ್ತ್ರದಾನಿ ಹಿರಣ್ಯದಾನಿಗಳ ಮನೆಯ ಬಾಗಿಲ ಕಾದಿಪ್ಪರಯ್ಯಾ ಬಹುವಿಧದ ವೇಷಧಾರಿಗಳು. ``ವಯೋವೃದ್ಧಾಸ್ತಪೋವೃದ್ಧಾ ವೇದವೃದ್ಧಾ ಬಹುಶ್ರುತಾಃ ಸರ್ವೇ ತೇ ದಾನಿವೃದ್ಧಸ್ಯ ದ್ವಾರೇ ತಿಷ್ಠಂತಿ ಕಿಂಕರಾಃ _ಎಂದುದಾಗಿ ದೈನ್ಯವ ಬಿಟ್ಟಿಪ್ಪ ನಿರಾಭಾರಿಯ ತೋರಿ ಬದುಕಿಸಾ ಕೂಡಲಚೆನ್ನಸಂಗಮದೇವಾ