ಅನ್ನವ ನೀಡುವವರಿಂಗೆ ಧಾನ್ಯವೆಸೆವ

Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಅನ್ನವ ನೀಡುವವರಿಂಗೆ ಧಾನ್ಯವೆಸೆವ ಲೋಕ. ಅರ್ಥವ ಕೊಡುವವರಿಂಗೆ ಪಾಷಾಣವೆಸೆವ ಲೋಕ. ಹೆಣ್ಣು ಹೊನ್ನು ಮಣ್ಣು ಮೂರನೂ ಕಣ್ಣಿನಲಿ ನೋಡಿ
ಕಿವಿಯಲಿ ಕೇಳಿ
ಕೈಯಲಿ ಮುಟ್ಟಿ
ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತ್ತು. ತನ್ನನಿತ್ತು ತುಷ್ಟಿವಡೆವರನೆನಗೆ ತೋರಾ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.