ಅನ್ಯವಿಚಾರವ ಮರೆದು ನಿಮ್ಮ ವಿಚಾರವೆಡೆಗೊಂಡಿತ್ತಾಗಿ
ಪ್ರಾಣದ ನೆಲೆಗೆಟ್ಟಿತ್ತಯ್ಯಾ ದಶವಾಯುಗಳ ಸಂಚ ತಪ್ಪಿತ್ತಯ್ಯಾ ಕರಣಂಗಳ ಲಿಂಗಕಿರಣಂಗಳು ನುಂಗಿದವಯ್ಯಾ ಒಳಗೆ ಕರತಳಾಮಳಕಗೊಂಡೆನಯ್ಯಾ ಹೊರಗೆ ಅದೆಂತೆಂದರಿಯದೆ ನೀನೆ ಗತಿಯಾಗಿದ್ದೆ ಕೂಡಲಸಂಗಮದೇವಾ.