ಅನ್ಯ ರಜವ ಸೋಂಕದೆ ತನ್ನ ರಜವ ಬಾಧಿಸದೆ ರವಿಯ ಬೆಳಸ ಬಳಸದೆ ಲಿಂಗದಲ್ಲಿ ಬೆಳೆದ ಬೆಳಸ ತಂದು ಜಂಗಮದಲ್ಲಿ ಸವೆಸುತಿಪ್ಪ[ನು] ಲಿಂಗಭಕ್ತ. ಆ ಭಕ್ತನಲ್ಲಿ ಗುಹೇಶ್ವರಲಿಂಗವಿಪ್ಪನು.