ಅಪರಿಮಿತ ಕತ್ತಲೆಯೊಳಗೆ ಪರಿಮಿತದ ಬೆಳಗನಿಕ್ಕಿದಡೆ ಬೆಳಕೂ ಅದೆ ಕತ್ತಲೆಯೂ ಅದೆ ! ಇದೇನು ಚೋದ್ಯವೊ? ಒಂದಕ್ಕೊಂದಂಜದು ! ಆನೆಯೂ ಸಿಂಹವೂ ಒಂದಾಗಿ ಉಂಬುದ ಕಂಡು ಬೆರಗಾದೆನು ಕಾಣಾ _ ಗುಹೇಶ್ವರಾ.