ಅಪ್ಪುವಿನ ಬಾವಿಗೆ ತುಪ್ಪದ ಘಟ; ಸಪ್ಪಗೆ ಸಿಹಿ ಎಂಬ ಎರಡಿಲ್ಲದ ರುಚಿ ಪರುಷ ಮುಟ್ಟದ ಹೊನ್ನು! ಕರೆಸದ ಬೊಜಗನು ಬೆರಸದೆ ಬಸುರಾಯಿತ್ತ ಕಂಡೆನಾಹಾ! ಅರುವಿನ ಆಪ್ಯಾಯನ ಮರಹಿನ ಸುಖವೊ! ಇದು ಕಾರಣ ಮೂರು ಲೋಕವಳಿಯಿತ್ತು ಗುಹೇಶ್ವರಾ.