ಅಯ್ಯಾ
ಘನಗಂಭೀರವಪ್ಪ ಸಮುದ್ರದೊಳಗೊಂದು ರತ್ನ ಹುಟ್ಟಿದಡೆ
ಆ ಸಮುದ್ರದೊಳಗಡಗಿರ್ಪುದಲ್ಲದೆ ಘನವಾಗಿ ತೋರಬಲ್ಲುದೆ ? ನಿಮ್ಮ ಕರುಣಕಟಾಕ್ಷದಿಂದುದಯಿಸಿ
ಅನಂತ ಪುರಾಣವೆಲ್ಲವು ನಿಮ್ಮ ಕೃಪೆಯಿಂದ ಸಾಧ್ಯವಾಯಿತ್ತೆನಗೆ. ಆದಿಯನಾದಿ ಇಲ್ಲದಂದು ನೀನೊಬ್ಬನೆ ಪ್ರಸಾದಿ. ಉಮೆಯ ಕಲ್ಯಾಣವಿಲ್ಲದಂದು ನೀನೊಬ್ಬನೆ ಪ್ರಸಾದಿ. ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ ಬಸವಣ್ಣಾ
ನಿಮ್ಮ ತೊತ್ತಿನ ತೊತ್ತಿನ ಮರುದೊತ್ತಿನ ಮಗ ನಾನಯ್ಯಾ.