Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಅಯ್ಯಾ
ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯಾ. ಅಯ್ಯಾ
ನಿಮ್ಮ ಶರಣರಿದ್ದ ಪುರವೆ ಕೈಲಾಸಪುರವಯ್ಯಾ. ಅಯ್ಯಾ
ನಿಮ್ಮ ಶರಣರು ನಿಂದುದೆ ನಿಜನಿವಾಸವಯ್ಯಾ. ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣ ಬಸವಣ್ಣನಿದ್ದ ಕ್ಷೇತ್ರ ಅವಿಮುಕ್ತ ಕ್ಷೇತ್ರವಾಗಿ
ಆನು ಸಂಗನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.