Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಅಯ್ಯಾ
ನಿಮ್ಮ ಸಜ್ಜನ ಸದ್ಭಕ್ತರ ಕಂಡೆನಾಗಿ
ಎನ್ನ ಕಂಗಳ ಪಟಲ ಹರಿಯಿತ್ತಿಂದು. ಅಯ್ಯಾ
ನಿಮ್ಮ ಸಜ್ಜನಸದ್ಭಕ್ತರ ಶ್ರೀಚರಣಕ್ಕೆರಗಿದೆನಾಗಿ
ಎನ್ನ ಹಣೆಯ ಲಿಖಿತ ತೊಡೆಯಿತ್ತಿಂದು. ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣ ಸಂಗನಬಸವಣ್ಣನ ಪಾದವ ಕಂಡು ಮಿಗೆ ಮಿಗೆ ನಮೋ ನಮೋ ಎನುತಿರ್ದೆನಯ್ಯಾ.