Title vachana saahitya
Author Akka Mahaadevi
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಅಯ್ಯಾ
ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ
ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ
ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ
ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ
ಅದು ದೊರೆಯದಿದ್ದಡೆ
ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ
ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ
ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ
ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ
ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ
ಮೂರು ವೇಳೆ ಪ್ರದಕ್ಷಿಣವ ಮಾಡಿ
ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು
ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ
ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ
ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ
ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ
ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ
ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ
ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ
ಎರಡು ವೇಳೆ ರೂಪ ತೋರಿ
ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ
ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ