ಅಯ್ಯಾ (ಆಯತ) ಲಿಂಗದಲ್ಲಿ ಆಗಾಗಿ ಆಚಾರಲಿಂಗಪ್ರಾಣಿಯಾದ ಆಚಾರಲಿಂಗದಲ್ಲಿ ಅವಧಾನಿಯಾಗಿ ಸರ್ವಾಚಾರಸಂಪನ್ನನಾದ ಸರ್ವಾಚಾರಸಂಪತ್ತಿನಲ್ಲಿ ಲಿಂಗೈಕ್ಯವಾಗಿಪ್ಪನು. ಕೂಡಲಚೆನ್ನಸಂಗನಲ್ಲಿ ಸಂಗನಬಸವಣ್ಣನು ಆಚಾರವ ಬಲ್ಲನಲ್ಲದೆ ನಾನೆತ್ತ ಬಲ್ಲೆನಯ್ಯಾ ಪ್ರಭುವೆ ?