ಅಯ್ಯಾ ! ನೀನೆಂದಡೆ ಏನೆಂಬೆನು ನಿನ್ನ ಹಂಗೇನು ಹರಿಯೇನು ನಿನ್ನ ಮುಖದಲ್ಲಿ ಒಂದಗುಳು ಸವೆಯದು. ನಿನ್ನ ಪ್ರಸಾದವ ಕೊಂಡೆನ್ನ ಭವಕ್ಕೆ ಬೀಜವಾಯಿತ್ತು. ಜಂಗಮವೆ ಲಿಂಗವೆಂದು ಒಕ್ಕುದ ಕೊಂಡಡೆ ಎನ್ನ ಭವಂ ನಾಸ್ತಿಯಾಯಿತ್ತು ಕೂಡಲಸಂಗಮದೇವಾ.