ಅಯ್ಯಾ
ಅಯ್ಯಾ ಎಂದು ಕರೆವುತ್ತಲಿದ್ದೇನೆ. ಅಯ್ಯಾ ಅಯ್ಯಾ ಎಂದು ಒರಲುತ್ತಲಿದ್ದೇನೆ. ಓ ಎನ್ನಲಾಗದೆ ಅಯ್ಯಾ ಆಗಳೂ ನಿಮ್ಮ ಕರೆವುತ್ತಲಿದ್ದೇನೆ ಮೋನವೇ ಕೂಡಲಸಂಗಮದೇವಾ. 56