ಅಯ್ಯಾ ನಿಮ್ಮ ಶರಣನು ಮೂರ್ತನಲ್ಲ ಅಮೂರ್ತನಲ್ಲ. ಲಿಂಗದಲ್ಲಿ ಪ್ರಾಣಸಂಚಿತ ಪ್ರಾಣದಲ್ಲಿ ಪ್ರಸಾದ ಸಂವರಣೆ ಪ್ರಸಾದದಲ್ಲಿ ಕಾಯಾಶ್ರಿತನು. ಲೋಕ ಲೌಕಿಕದ ಪ್ರಕಾರದುದಯನಲ್ಲ ಕೂಡಲಚೆನ್ನಸಂಗಾ ನಿಮ್ಮ ಶರಣ