ಅಯ್ಯ ಆಚಾರವಿಲ್ಲದ ಜಂಗಮದಲ್ಲಿ ಪಾದೋದಕಪ್ರಸಾದವ ಕೊಳಲಾಗದು. ಆಚಾರವಿಲ್ಲದ ಜಂಗಮ[ವ] ದೇವರೆಂದು ಭಾವಿಸಲಾಗದು. `ಆಚಾರಶೂನ್ಯಂ ಚ ಭೂತಪ್ರಾಣೀ' ಎಂದುದಾಗಿ ಆಚಾರವಿಲ್ಲದ ಅನಾಮಿಕರ ಕೈಯಲ್ಲಿ ಪಾದೋದಕ ಪ್ರಸಾದ ಉಪದೇಶವ ಕೊಂಡವಂಗೆ ಅಘನಾಸ್ತಿಯಾಗದು ಮುಂದೆ ಅಘೋರನರಕ ತಪ್ಪದು ಕಾಣಾ ಗುಹೇಶ್ವರಾ.