ಅಯ್ಯ ! ನಿರವಯಶೂನ್ಯಲಿಂಗದೇಹಿ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ ! ನಿರವಯಶೂನ್ಯಲಿಂಗದೇಹಿ ನಿಜಕರುಣಪ್ರಸಾದಾತ್ಮನು ಆ ನಿರವಯ ಶೂನ್ಯಲಿಂಗದಾಚಾರದಲ್ಲಿಯೆ ನಡೆವನಯ್ಯ ! ಲೋಕವರ್ತಕ ಲೋಕಚಾತುರ್ಯಕ್ಕೆ
ಲೋಕವ್ಯವಹರಣೆಯನನುಕರಿಸಿ ನಡೆವನಲ್ಲ ! ನಿಜಶಿವಜ್ಞಾನ_ನಿಜಶಿವಕ್ರಿಯಾಪ್ರಕಾಶವ ಸಂಬಂಧಿಸಿಕೊಂಡು ಸರ್ವಾಂಗವು ನಿರವಯಶೂನ್ಯಲಿಂಗರೂಪವಾಗಿ ಲಿಂಗಕ್ಕೆ ಲಿಂಗವೆ ಭಾಜನ ಪದಾರ್ಥ-ಪ್ರಸಾದ_ಪರಿಣಾಮವಾಗಿರಬಲ್ಲಡೆ ಅದು ಲಿಂಗೈಕ್ಯ ನೋಡ ! ನೆಲನಿಲ್ಲದ ನಿರ್ಮಲ ಚಿದ್ಭೂಮಿಯಲ್ಲಿ ಸ್ವಯಜ್ಞಾನಶಿಶು ಉದಯವಾಯಿತ್ತು ನೋಡ ! ಆ ಸ್ವಯಜ್ಞಾನ ಶಿಶು ಊಧ್ರ್ವಲೋಕಕ್ಕೆ ಹೋಗಿ ವ್ಯೋಮಾಮೃತಪ್ರಸಾದವನುಂಡು ನಾಮರೂಪು_ಕ್ರಿಯೆಗಳನಳಿದು
ನಿರವಯಶೂನ್ಯಲೀಲೆಯ ಧರಿಸಿ ಸೋಮನಾಳದಲ್ಲಿ ಶುಭ್ರ ಕಳೆ; ಪಿಂಗಳನಾಳದಲ್ಲಿ ಸುವರ್ಣಕಳೆ; ಸುಷುಮ್ನನಾಳದಲ್ಲಿ ಸುಜ್ಞಾನಜ್ಯೋತಿಪ್ರಕಾಶದಂತೆ ಏಳುನೂರ ಎಪ್ಪತ್ತುನಾಳದಲ್ಲಿ ಹೊಳೆವುತ್ತಿರ್ಪ ಪರಮಗುರು ಸಂಗನಬಸವಣ್ಣನ ಬೆಳಗಿನ ನಿಜಪ್ರಸಾದದೊಳಗೆ ಗುಹೇಶ್ವರ ಪ್ರಭುವೆಂಬ ರೂಪತಾಳಿ
ಪಕ್ವವಾದ ಮೇಲೆ ಮತ್ತಲ್ಲಿಯೆ ನಿರವಯಶೂನ್ಯವಪ್ಪುದು ತಪ್ಪದು ನೋಡ ! ಚೆನ್ನಬಸವಣ್ಣ.