ಅಯ್ಯ ! ನಿರವಯಶೂನ್ಯಲಿಂಗಮೂರ್ತಿಯ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ ! ನಿರವಯಶೂನ್ಯಲಿಂಗಮೂರ್ತಿಯ ನಿಲುಕಡೆ ಎಂತೆಂದಡೆ
_ ಸಾಕಾರನಲ್ಲ ನಿರಾಕಾರನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಆದಿಯಲ್ಲ ಅನಾದಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಇಹದವನಲ್ಲ ಪರದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಸುಖದವನಲ್ಲ ದುಃಖದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಪುಣ್ಯದವನಲ್ಲ ಪಾಪದವನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಕರ್ತುವಲ್ಲ ಭೃತ್ಯನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಕಾರಣನಲ್ಲ ಕಾರ್ಯನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಧರ್ಮಿಯಲ್ಲ ಕರ್ಮಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಪೂಜ್ಯನಲ್ಲ ಪೂಜಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಇಂತು ಉಭಯವಳಿದು ಬೆಳಗುವ ಸಂಗನಬಸವಣ್ಣನ ಹೃತ್ಕಮಲಮಧ್ಯದಲ್ಲಿ ನೆಲಸಿರ್ಪುದು ನೋಡ ! ಗುಹೇಶ್ವರಲಿಂಗವು ಚೆನ್ನಬಸವಣ್ಣ.