Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅಯ್ಯ ! ಪ್ರಾಣ
ಅಪಾನ
ವ್ಯಾನ
ಉದಾನ
ಸಮಾನ
ನಾಗ
ಕೂರ್ಮ
ಕೃಕರ
ದೇವದತ್ತ
ಧನಂಜಯವೆಂಬ ದಶವಾಯು ಪ್ರಾಣಗುಣಂಗಳ ನಷ್ಟವ ಮಾಡಿ ಯಮ
ನಿಯಮ
ಆಸನ
ಪ್ರಾಣಾಯಾಮ
ಪ್ರತ್ಯಾಹಾರ
ಧಾನ್ಯ
ಧಾರಣ
ಸಮಾಧಿಯೆಂಬ ಹಠಯೋಗ ಜಡಶೈವಮಾರ್ಗವನುಳಿದು
ನಿಭ್ರ್ರಾಂತ
ನಿಶ್ಚಿಂತ
ನಿರ್ಗುಣಾನಂದಲೀಲೆಯನರಿದು
ಹಿಂದೆ ಹೇಳಿದ ಸದ್ಭಕ್ತ_ಮಹೇಶ_ಪ್ರಸಾದಿಸ್ಥಲವ ಅಂಗವ ಮಾಡಿಕೊಂಡು ಸರ್ವಾಂಗಲೋಚನಮೂರ್ತಿಯಾಗಿ ಪ್ರಭಾವಿಸುವ ನಿಜಪ್ರಾಣಲಿಂಗಿಯಂತರಂಗದಲ್ಲಿ ಚಿನ್ಮಯ ಸ್ವರೂಪಲೀಲೆಯಿಂ ಸಮಸ್ತ ತತ್ತ್ವಾನುಭಾವವನೊಳಗು ಮಾಡಿಕೊಂಡು ಹದಿನಾಲ್ಕು ಸ್ಥಲಂಗಳ ಗರ್ಭೀಕರಿಸಿಕೊಂಡು ಐದು ಸಾವಿರದ ನೂರ ಎಂಬತ್ತುನಾಲ್ಕು ಮಂತ್ರಮಾಲೆಗಳ ಪಿಡಿದುಕೊಂಡು ಇಪ್ಪತ್ತುನಾಲ್ಕು ಸಕೀಲಗರ್ಭದಿಂ
ಬಂಗಾರ ಲೋಹವನೊಳಕೊಂಡಂತೆ
ತನ್ನ ಸೋಂಕಿದವರೆಲ್ಲ ತನ್ನಂತೆಯೆಂಬ ಗುರುವಚನೋಕ್ತಿಪ್ರಮಾಣದಿಂದೆ ಶಬ್ದದೊಳಗೆ ನಿಃಶಬ್ದವಡಗಿರ್ಪ ಹಾಂಗೆ ಏಕಸ್ವರೂಪಿನಿಂದೆ ಯಜನಸ್ವರೂಪಮೂರ್ತಿ ಜಂಗಮಲಿಂಗವಾಗಿ ನೆಲಸಿರ್ಪುದು ನೋಡ ! ನಿರವಯಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.