ಅರಿದೆಹೆ ಅರಿದೆಹೆನೆಂದಡೆ ಅದೇಕೊ ಮುಂದೆ ಮರವೆ? ನೀನರಿದೆನೆಂಬುದು ನಿನ್ನಲ್ಲಿ ಲೇಸಾಗಿ ಉಳ್ಳಡೆ
ನಿನ್ನರಿವೆಲ್ಲವ ಹರಿಹಂಚ ಮಾಡಿ ಹೋದಡರಿ ಮರುಳೆ ! ಸ್ವತಂತ್ರ ಘನದೊಳಗಿರ್ದು
ನಿಜವನರಿದಿಹೆನೆಂದಡೆ ಮೂರ್ತಿ ಕಿರಿದಲ್ಲ
ನಿಲ್ಲು ಮಾಣು. ಗುಹೇಶ್ವರನೆಂಬ ಲಿಂಗದ ಘನಘಟ್ಟಿಯನರಿವಡೆ ನಿನ್ನರಿವೆಲ್ಲವ ಹರಿಹಂಚು ಮಾಡಿ
ನೀನರಿ ಮರುಳೇ_ಅನುಭಾವಿಯಾದಡೆ