ಅರಿಯದವರೊಡನೆ ಸಂಗವ ಮಾಡಿದಡೆ


Pages   (key to Page Status)   

ಅರಿಯದವರೊಡನೆ ಸಂಗವ ಮಾಡಿದಡೆ ಕಲ್ಲ ಹೊಯ್ದು ಕಿಡಿಯ ತೆಗೆದುಕೊಂಬಂತೆ. ಬಲ್ಲವರೊಡನೆ ಸಂಗವ ಮಾಡಿದಡೆ ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ. ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣರ ಸಂಗವ ಮಾಡಿದಡೆ ಕರ್ಪುರ ಗಿರಿಯ ಉರಿಕೊಂಬಂತೆ.