ಅರಿವುಗೆಟ್ಟು ಮರ ಕುರು ಹಳಿದು ಭಾವಭ್ರಾಂತು ನಿಭ್ರಾಂತವಾದವರ ಕೈಯಲ್ಲಿ ಕರುಹನರಸುವರೆ ಹೇಳಾ ? ತಾನಳಿದು ತಾನುಳಿದು ತಾನುತಾನಾದ ನಿಜಶರಣಂಗೆ ಅಂತರಂಗದಲ್ಲಿ ಒಂದು ಅರಿವುಂಟೆ ? ಗುಹೇಶ್ವರನ ಶರಣರ ನಿಲವು ಕಾಯಗೊಂಡವರ ಕಣ್ಣಿಂಗೆ ಸಂದೇಹವಾಗಿಪ್ಪುದು ನಿಸ್ಸಂದೇಹಿಗಳಿಗೆ ನಿಜವಾಗಿಪ್ಪುದು ನೋಡಾ ಮರುಳೆ