ಅರಿವು ಉದಯವಾದಲ್ಲದೆ ಮರಹು


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಅರಿವು ಉದಯವಾದಲ್ಲದೆ ಮರಹು ನಷ್ಟವಾಗದು. ಮರಹು ನಷ್ಟವಾದಲ್ಲದೆ ಅರಿವು ಸಯವಾಗದು. ಅರಿವು ಸಯವಾಗಿ ದೊರೆಕೊಂಡ ಬಳಿಕ; ಗುರುವಾರು ? ಲಿಂಗವಾರು ? ಆವುದು ಘನ
ಆವುದು ಕಿರಿದು ಹೇಳಾ ? ಗುಹೇಶ್ವರಲಿಂಗದಲ್ಲಿ ಅರಿದು ಮರೆದು ಉಪದೇಶವ ಹಡೆದಡೆ ಮುಂದೆ ನಿಜವೆಂತು ಸಾಧ್ಯವಪ್ಪುದು
ಹೇಳಾ ಮಡಿವಾಳ ಮಾಚಯ್ಯಾ ?