ಅರ್ಚನೆ ಪೂಜನೆಯ ನಿಮಗೆ ನಾನು ಹಂಗು ಹರಿಯಿಲ್ಲದೆ ಮಾಡುವೆನಯ್ಯಾ ನಾ ಮಾಡುವ ಕ್ರೀಯೆಲ್ಲವು ನೀವೆಯಾದ ಕಾರಣ ನಿಮ್ಮಲ್ಲಿ ತದ್ಗತನಾಗಿದ್ದೆ ಕಾಣಾ ಗುಹೇಶ್ವರಾ.