ಅರ್ಪಿತದಲ್ಲಿ ಅವಧಾನವರತು ಅನರ್ಪಿತದಲ್ಲಿ (ಅರ್ಪಿತದಲ್ಲಿ?) ಸುಯಿಧಾನವರತು. ಬಂದುದು ಬಾರದುದೆಂದರಿಯದೆ ನಿಂದ ನಿಲವಿನ ಪರಿಣಾಮತೆಯಾಯಿತ್ತು. ರುಚಿ ರೂಪಂ ನ ಚ ಜ್ಞಾನಂ ಅರ್ಪಿತಾನರ್ಪಿತಂ ತಥಾ ಆದೌ ಪ್ರವರ್ತತೇ ಯಸ್ಯ ಶಿವೇನ ಸಹಮೋದತೇ ಎಂಬುದಾಗಿ ಕೂಡಲಚೆನ್ನಸಂಗಯ್ಯಾ. ನಿಮ್ಮವರು ಶಿವಸುಖಸಂಪನ್ನರಾದರಯ್ಯಾ.